ಕೋವಿಡ್ ಸಾಂಕ್ರಾಮಿಕದಿಂದ ಸರಣಿ ಸಾವುಗಳಾಗುತ್ತಿರುವುದಕ್ಕೆ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಟ್ವಿಟರ್‌ನಲ್ಲಿ ಬೇಸರ ಹೊರಹಾಕಿರುವ ಅವರು, ‘ನಮ್ಮ ತಲೆಮಾರು ಇಂಥ ಕರಾಳ ದಿನಗಳಿಗೆ ಸಾಕ್ಷಿಯಾದೀತು ಎಂದು ಯಾರೂ ಎಣಿಸಿರಲಿಲ್ಲ. ಶತಾಯ ಗತಾಯ ಹೋರಾಡಿ ಹಾಸಿಗೆ ಪಡೆದುಕೊಂಡರೆ ದಾಖಲಾಗುವ ಮೊದಲೇ ನಾಲ್ವರು ಮಾರ್ಗ ಮಧ್ಯದಲ್ಲಿ ಮೃತ್ಯು ಮಂಚವೇರಿದ್ದಾರೆ. ಕ್ಷೇಮವೆಂದು ನಂಬಿದ್ದ ನನ್ನ ಹಳ್ಳಿಯಲ್ಲೂ ಸಾಲುಸಾಲಾಗಿ ಹೆಣ ಬೀಳುತ್ತಿವೆ. ಎಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ’ ಎಂದು ಬೇಸರ ತೋಡಿಕೊಂಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಚಿತ್ರರಂಗದ ಹಲವರು ಜೀವ ಕಳೆದುಕೊಂಡಿದ್ದಾರೆ. ಚಂದ್ರಶೇಖರ್ ಅವರ ಆಪ್ತರು ಕೂಡಾ ಅಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಟ್ವೀಟ್ ಮೂಲಕ ಬೇಸರ ಹೊರಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.