ADVERTISEMENT

ಗಾಯಕಿ ಲತಾ ಮಂಗೇಶ್ಕರ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 6:53 IST
Last Updated 16 ಜನವರಿ 2022, 6:53 IST
ಲತಾ ಮಂಗೇಶ್ಕರ್‌
ಲತಾ ಮಂಗೇಶ್ಕರ್‌   

ನವದೆಹಲಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಕಳೆದ ವಾರದ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ ಕೊರೊನಾ ವೈರಸ್‌ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದು. ಮುನ್ನೆಚ್ಚರಿಕೆಯ ಕಾರಣಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ADVERTISEMENT

ವೈದ್ಯರು ಅವರನ್ನು ನೋಡಲು ಯಾರಿಗೂ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.