ADVERTISEMENT

ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ವೇಳೆ ನಿಯಮ ಉಲ್ಲಂಘನೆ:ಅಭಿಮಾನಿಗಳ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 8:13 IST
Last Updated 18 ಜೂನ್ 2020, 8:13 IST
   

ಬೆಂಗಳೂರು: ಇತ್ತೀಚೆಗಷ್ಟೇ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾಅವರ ಅಂತ್ಯಕ್ರಿಯೆ ವೇಳೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ಜಯನಗರ, ತಲಘಟ್ಟಪುರ, ಜಯನಗರ, ಬನಶಂಕರಿ, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ.

ಕೊರೊನಾ ರೋಗದ ತೀವ್ರತೆ ಹೆಚ್ಚಾಗುತ್ತಿದ್ದ ವೇಳೆ ಚಿರಂಜೀವಿ ಸರ್ಜಾ ಸಾವು ಸಂಭವಿಸಿತ್ತು. ಸಾರ್ವಜನಿಕರ ವೀಕ್ಷಣೆಗೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಡಲಾಗಿತ್ತು. ಅಂತರ ಕಾಯ್ದುಕೊಳ್ಳದೆಸಾವಿರಾರು ಜನ ಪಾರ್ಥಿವ ಶರೀರವನ್ನು ವೀಕ್ಷಿಸಿದ್ದರು.

ADVERTISEMENT

ಕೊರೊನಾ ರೋಗ ನಿಯಂತ್ರಣದ ನಿಯಮ‌ ಉಲ್ಲಂಘನೆ ಆರೋಪದಡಿ ಇದೀಗ ಪ್ರಕರಣಗಳು ದಾಖಲಾಗಿವೆ‌.

ದಕ್ಷಿಣ ತಾಲೂಕು ನೆಲಗುಳಿ ಗ್ರಾಮದಲ್ಲಿ ಚಿರು ಅಂತ್ಯ ಸಂಸ್ಕಾರ ಕಾರ್ಯ ನಡೆದಿತ್ತು. ನಿಯಮ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.