ADVERTISEMENT

‘ಜಡ್ಜ್ ಮೆಂಟ್’ ಮುಗಿಸಿದ ರವಿಚಂದ್ರನ್‌

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2023, 23:50 IST
Last Updated 26 ಸೆಪ್ಟೆಂಬರ್ 2023, 23:50 IST
ಮೇಘನಾ ಗಾಂವ್ಕರ್‌, ರವಿಚಂದ್ರನ್‌
ಮೇಘನಾ ಗಾಂವ್ಕರ್‌, ರವಿಚಂದ್ರನ್‌   

ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್, ಮೇಘನಾ ಗಾಂವ್ಕರ್ ಮುಖ್ಯಭೂಮಿಕೆಯಲ್ಲಿರುವ ‘ದ ಜಡ್ಜ್ ಮೆಂಟ್’ ಚಿತ್ರೀಕರಣ ಮುಕ್ತಾಯಗೊಂಡಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆ್ಯಂಡ್‌ ಎಂಟರ್‌ಟೈನ್‌ಮೆಂಟ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಗುರುರಾಜ ಕುಲಕರ್ಣಿ(ನಾಡಗೌಡ) ಆ್ಯಕ್ಷನ್‌–ಕಟ್‌ ಹೇಳಿದ್ದಾರೆ. 

ಧನ್ಯಾ ರಾಮ್‌ಕುಮಾರ್‌, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್. ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ ಮೊದಲಾದವರು ತಾರಾಗಣದಲ್ಲಿದ್ದಾರೆ. 

‘ಇದೊಂದು ಕಾನೂನಿನ ಕಥೆಯನ್ನು ಹೊಂದಿರುವ ಚಿತ್ರ. ಸರ್ಕಾರ ಮತ್ತು ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಮಾತಿನ ಭಾಗದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಪ್ರಾರಂಭವಾಗಿದೆ’ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ ತಿಳಿಸಿದ್ದಾರೆ.

ADVERTISEMENT

ಈ ಚಿತ್ರಕ್ಕೆ ಪಿಕೆಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ.ಎಸ್. ಸಂಕಲನ‌ವಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.