ನಟ ಝೈದ್ ಖಾನ್
ಚಿತ್ರ: ಇನ್‌ಸ್ಟಾಗ್ರಾಮ್
ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ‘ಬನಾರಸ್’ ಸಿನಿಮಾ ಬಳಿಕ ಕಲ್ಟ್ ಸಿನಿಮಾದಲ್ಲಿ ನಟ ಝೈದ್ ಖಾನ್ ಅವರು ನಟಿಸುತ್ತಿದ್ದಾರೆ. ಇದೀಗ ಈ ಸಿನಿಮಾ ಪ್ಯಾಥೋ ಹಾಡು ರಿಲೀಸ್ ಆಗಿದೆ.
ಈ ಕುರಿತು ನಟ ಝೈದ್ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ‘ಕೊನೆಗೂ ಹಾಡು ಬಿಡುಗಡೆಯಾಗಿದೆ ದಯವಿಟ್ಟು ಹೋಗಿ ಹಾಡನ್ನು ನೋಡಿ’ ಎಂದು ಬರೆದುಕೊಂಡಿದ್ದಾರೆ. ಇನ್ನು, ‘ಬನಾರಸ್’ ಚಿತ್ರದಲ್ಲಿ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಚಿತ್ರದಲ್ಲಿ ಮಾಸ್ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಫಸ್ಟ್‌ಲುಕ್‌ನಲ್ಲಿ ಝೈದ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು.
‘ಉಪಾಧ್ಯಕ್ಷ’ ಸಿನಿಮಾ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಈ ಸಿನಿಮಾ 2026ರ ಜ.23ರಂದು ತೆರೆಕಾಣಲಿದೆ. ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ಚಿತ್ರದ ಎರಡನೇ ಹಾಡು ‘ಬ್ಲಡಿ ಲವ್’ ಬಿಡುಗಡೆಯಾಯಿತು. ಚಿತ್ರದಲ್ಲಿ ನಾಯಕಿಯರಾಗಿ ರಚಿತಾ ರಾಮ್ ಮತ್ತು ಮಲೈಕಾ ಟಿ.ವಸುಪಾಲ್ ಅಭಿನಯಿಸಿದ್ದಾರೆ. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಜೆ.ಎಸ್. ವಾಲಿ ಛಾಯಾಚಿತ್ರಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.