ADVERTISEMENT

D59: ದರ್ಶನ್ ಹುಟ್ಟುಹಬ್ಬದಂದೇ ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2024, 4:39 IST
Last Updated 16 ಫೆಬ್ರುವರಿ 2024, 4:39 IST
   

ಬೆಂಗಳೂರು: ‘ಕಾಟೇರ’ ಯಶಸ್ಸಿನಲ್ಲಿ ತೇಲುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಸಿನಿಮಾ ‘D59' ಪೋಸ್ಟರ್ ಬಿಡುಗಡೆಯಾಗಿದೆ.

ಯಜಮಾನ, ಕ್ರಾಂತಿ ಸಿನಿಮಾ ಬಳಿಕ ಮತ್ತೆ ನಿರ್ಮಾಪಕರಾದ ಶೈಲಜಾ ನಾಗ್, ಬಿ. ಸುರೇಶ್ ದರ್ಶನ್ ಅವರ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ದರ್ಶನ್ ಅವರ ಹುಟ್ಟುಹಬ್ಬದ ದಿನವಾದ ಇಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ನಿರ್ಮಾಪಕಿ ಶೈಲಜಾ ನಾಗ್ ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ಕಾಟೇರ ಸಿನಿಮಾ ಯಶಸ್ಸಿನ ಬೆನ್ನಲ್ಲೇ ತರುಣ್ ಸುಧೀರ್, ದರ್ಶನ್ ಅವರಿಗೆ ಮತ್ತೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ರಾಬರ್ಟ್, ಕಾಟೇರ ಬಳಿಕ ತರುಣ್ ಸುಧೀರ್ ನಿರ್ದೇಶಿಸುತ್ತಿರುವ ದರ್ಶನ್ ಅವರ ಮೂರನೇ ಸಿನಿಮಾ ಇದಾಗಿದೆ.

ಡಿ 59 ಚಿತ್ರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ ಹೇಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.