ADVERTISEMENT

ಪುಷ್ಪ 2 ಚಿತ್ರ ತಂಡವನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2025, 8:10 IST
Last Updated 8 ಫೆಬ್ರುವರಿ 2025, 8:10 IST
   

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆ ತಯಾರಿಯಲ್ಲಿ ಇರುವ ಡಾಲಿ ಧನಂಜಯ ಚಿತ್ರರಂಗದ ಸೆಲೆಬ್ರಿಟಿಗಳನ್ನು ಭೇಟಿ ಮಾಡಿ ಮದುವೆಗೆ ಆಹ್ವಾನ ಪತ್ರಿಕೆಯನ್ನು ನೀಡುತ್ತಿದ್ದಾರೆ.

ಸದ್ಯ ಅವರು ‘ಪುಷ್ಪ 2’ ಚಿತ್ರ ತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಚಿತ್ರದ ನಾಯಕ ಅಲ್ಲು ಅರ್ಜುನ್, ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ನಿರ್ದೇಶಕ ಸುಕುಮಾರ್ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿ ಡಾಲಿ ಧನಂಜಯ ಅವರು, ಜಾಲಿ ರೆಡ್ಡಿ ಪಾತ್ರದಲ್ಲಿ ಮಿಂಚಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.