ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.
ಈ ಚಿತ್ರದ ಫಸ್ಟ್ ಲುಕ್ನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಚಿತ್ರತಂಡ ಅರ್ಪಿಸಿದೆ.
ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷಾ ನಟಿಸುತ್ತಿದ್ದಾರೆ.
ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು(ಜ್ಯೂನಿಯರ್ ರಾಜಕುಮಾರ್), ಶೋಭನ್ ಅಕ್ಷರ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಎಂ.ರಮೇಶ್ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸುತ್ತಿದ್ದಾರೆ.
ಮಹಿತ್ ನಾರಾಯಣ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಎ.ಕೆ.ಆನಂದ್ ಛಾಯಾಗ್ರಹಣ, ಶ್ರೀನಿವಾಸ್ ಪಿ. ಬಾಬು ಸಂಕಲನ ಹಾಗೂ ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.