
ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರ ಗುರುವಾರ (ಡಿ.11) ತೆರೆ ಕಾಣುತ್ತಿದೆ. ಪ್ರಕಾಶ್ ವೀರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ನಟ ದರ್ಶನ್ ಜೈಲಿನಲ್ಲಿದ್ದು, ಅವರ ಪತ್ನಿ ವಿಜಯಲಕ್ಷ್ಮಿ ಚಿತ್ರತಂಡದ ಬೆನ್ನಿಗೆ ನಿಂತಿದ್ದಾರೆ.
ದರ್ಶನ್ ಹಿಂದಿನ ಚಿತ್ರ ‘ಕಾಟೇರ’ 2023ರ ಡಿಸೆಂಬರ್‌ನಲ್ಲಿ ತೆರೆ ಕಂಡು ಯಶಸ್ವಿಯಾಗಿತ್ತು. ಅದೇ ರೀತಿ ಈ ಸಿನಿಮಾವನ್ನು ಗೆಲ್ಲಿಸಬೇಕೆಂದು ಚಿತ್ರತಂಡ ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರ ಡಿಸೆಂಬರ್‌ನಲ್ಲಿ ಈ ಚಿತ್ರ ತೆರೆಯಲ್ಲಿರಬೇಕಿತ್ತು. 2024ರ ಪ್ರಾರಂಭದಿಂದಲೇ ಚಿತ್ರೀಕರಣ ಶುರುವಾಗಿತ್ತು. ಆದರೆ ಜೂನ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ಚಿತ್ರೀಕರಣ ಸ್ಥಗಿತಗೊಂಡಿತು.
ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ಚಿತ್ರದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಸುಧಾಕರ್ ರಾಜ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.