
ಅಚ್ಯುತ್ ಕುಮಾರ್
ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್ ನಟನೆಯ ‘ಡೆವಿಲ್–ದಿ ಹೀರೊ’ ಸಿನಿಮಾ ಡಿ.11ರಂದು ತೆರೆಕಾಣುತ್ತಿದೆ. ಸಿನಿಮಾ ಬಿಡುಗಡೆಗೆ ಸಿದ್ಧತೆ ಆರಂಭಿಸಿರುವ ಚಿತ್ರತಂಡ ಸಿನಿಮಾದೊಳಗೆ ಕಲಾವಿದರ ಲುಕ್ ಪರಿಚಯಿಸಿದೆ.
ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ಜೋಡಿಯಾಗಿದ್ದಾರೆ. ಇತ್ತೀಚೆಗಷ್ಟೇ ‘ಬಿಗ್‌ಬಾಸ್’ನಲ್ಲಿ ಮಿಂಚುತ್ತಿರುವ ಗಿಲ್ಲ ನಟನ ಪಾತ್ರದ ಪೋಸ್ಟರ್ ರಿಲೀಸ್ ಮಾಡಿದ್ದ ತಂಡ ಇದೀಗ ಬಹುಭಾಷಾ ನಟರಾದ ಮಹೇಶ್ ಮಂಜ್ರೇಕರ್ ಹಾಗೂ ಅಚ್ಯುತ್ ಕುಮಾರ್ ಪಾತ್ರವನ್ನು ಅನಾವರಣಗೊಳಿಸಿದೆ. ಇವರ ಜೊತೆಗೆ ಕಿರುತೆರೆಯಲ್ಲಿ ಮಿಂಚಿದ ‘ಹುಲಿ ಕಾರ್ತಿಕ್’ ಕೂಡಾ ಚಿತ್ರದ ತಾರಾಬಳಗದಲ್ಲಿದ್ದಾರೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣ ಮಾಡಿರುವ ‘ಡೆವಿಲ್’ನ ಚಿತ್ರೀಕರಣ ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ನಡೆದಿದೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.