ADVERTISEMENT

ದರ್ಶನ್ ಅಭಿಮಾನಿಗಳಿಗೆ ಶುಭ ಸುದ್ದಿ: ‘ಡೆವಿಲ್’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ನವೆಂಬರ್ 2025, 12:16 IST
Last Updated 14 ನವೆಂಬರ್ 2025, 12:16 IST
<div class="paragraphs"><p>ನಟ ದರ್ಶನ್&nbsp;</p></div>

ನಟ ದರ್ಶನ್ 

   

ಚಿತ್ರ: ಎಕ್ಸ್ ಖಾತೆ

ನಟ ದರ್ಶನ್ ಅಭಿಮಾನಿಗಳಿಗೆ ‘ದಿ ಡೆವಿಲ್’ ಚಿತ್ರತಂಡ ಅಪ್‌ಡೇಟ್‌ ಒಂದನ್ನು ನೀಡಿದೆ. ‘ದಿ ಡೆವಿಲ್’ ಚಿತ್ರದ ಹೊಸ ಹಾಡಿಗೆ ಸಜ್ಜಾಗಿ ಇನ್ನೂ ಎರಡು ದಿನ ಬಾಕಿ ಇದೆ ಎಂದು ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ADVERTISEMENT

ಈಗಾಗಲೇ ಈ ಸಿನಿಮಾದ ಎರಡು ಹಾಡುಗಳು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಈಗ ಡೆವಿಲ್‌ ಸಿನಿಮಾದ ಮೂರನೇ ಹಾಡಿಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16 ಮಧ್ಯಾಹ್ನ 12:03ಕ್ಕೆ ದಿ ಡೆವಿಲ್‌ನ ಹೊಸ ಹಾಡು ಬಿಡುಗಡೆಯಾಗಲಿದೆ. ಈ ಸಂಬಂಧ ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಅದರ ಜೊತೆಗೆ ‘ಇನ್ನೇನು 2 ದಿನ ಬಾಕಿ’ ಎಂದು ಬರೆದುಕೊಂಡಿದೆ.

ಡೆವಿಲ್‌ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.