ನಟ ದರ್ಶನ್ ಹಾಗೂ ರಚನಾ ರೈ ನಟನೆಯ ಡೆವಿಲ್ ಸಿನಿಮಾದ ‘ಒಂದೇ ಒಂದು ಸಲ‘ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಈ ಚಿತ್ರದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಸಾಂಗ್ ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ.
ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಡೆವಿಲ್– ದಿ– ಹೀರೊ‘ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಕೂಡ ಮುಗಿದು ಬಿಡುಗಡೆ ಸಿದ್ಧತೆ ನಡೆಸಲಾಗುತ್ತಿದೆ ಈ ಹಿಂದೆ ಚಿತ್ರತಂಡ ತಿಳಿಸಿತ್ತು.
ಡೆವಿಲ್ ಸಿನಿಮಾವು ರಾಜ್ಯದಾದ್ಯಂತ ಡಿಸೆಂಬರ್ 12ರಂದು ಬೆಳ್ಳಿ ತೆರೆಗೆ ಬರಲಿದೆ ಎಂದು ವಿಜಯಲಕ್ಷ್ಮಿ ಅವರು ಕೆಲ ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ತಿಳಿಸಿದ್ದರು.
ಶ್ರೀ ಜೈಮಾತ ಕಂಬೈನ್ಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಾಣ ಮಾಡಿರುವ ಡೆವಿಲ್ ಸಿನಿಮಾದಲ್ಲಿ ತುಳಸಿ, ಅಚ್ಯುತ್ ಕುಮಾರ್, ಮಹೇಶ್ ಮಂಬ್ರೇಕರ್, ಶ್ರೀನಿವಾಸಪ್ರಭು, ಶೋಭರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.