ದರ್ಶನ್
ಬೆಂಗಳೂರು: ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.
ಆ.15ರಂದೇ ಈ ಹಾಡು ಬಿಡುಗಡೆಯಾಗಬೇಕಿತ್ತು. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದುಗೊಂಡ ಕಾರಣದಿಂದ ಹಾಡು ಬಿಡುಗಡೆ ಮುಂದೂಡಿಕೆಯಾಗಿತ್ತು.
ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ಹಾಡಿನ ಸಾಲನ್ನು ಅನಿರುದ್ಧ ಶಾಸ್ತ್ರಿ ಬರೆದಿದ್ದಾರೆ. ದೀಪಕ್ ಬ್ಲೂ ಹಾಡಿದ್ದಾರೆ. ಹಾಡಿನ ನೃತ್ಯಕ್ಕೆ ಸಂತು ಮಾಸ್ಟರ್ ಕೊರಿಯೊಗ್ರಫಿ ಮಾಡಿದ್ದಾರೆ.
ರ್‍ಯಾಪ್‌ಗಳ ಮಧ್ಯೆ ಸಾಗುವ ಹಾಡು ಅದ್ಧೂರಿ ಬೀಟ್ಸ್ ಮತ್ತು ಬಿಜಿಎಂನಿಂದ ಕೂಡಿದೆ. ಹಾಡಿನಲ್ಲಿ ದರ್ಶನ್ ಕೆಂಪು ಬಣ್ಣದ ಜಾಕೆಟ್ ಧರಿಸಿ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ಯುಟ್ಯೂಬ್‌ನಲ್ಲಿ ಹಾಡು ಬಿಡುಗಡೆಯಾದ ಒಂದು ಗಂಟೆಯೊಳಗೆ 7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಸದ್ಯ ಜೈಲಿನಲ್ಲಿದ್ದು, ಅವರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪತ್ನಿ ವಿಜಯಲಕ್ಷ್ಮಿ ನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.