ADVERTISEMENT

ನಟ ದರ್ಶನ್‌ ಅಭಿನಯದ ‘ಡೆವಿಲ್‌’ ಚಿತ್ರ ಶೀಘ್ರ ತೆರೆಗೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 0:56 IST
Last Updated 29 ಜುಲೈ 2025, 0:56 IST
   

ಪ್ರಕಾಶ್‌ ವೀರ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ದರ್ಶನ್‌ ನಟನೆಯ ‘ಡೆವಿಲ್–ದಿ ಹೀರೊ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್‌ ಕೂಡಾ ಮುಗಿದಿದೆ ಎಂದು ಚಿತ್ರತಂಡ ತಿಳಿಸಿದೆ.

ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ ಎಂದು ಪ್ರಕಾಶ್‌ ವೀರ್‌ ಹೇಳಿದ್ದಾರೆ. 

ಜೆ.ಜಯಮ್ಮ ನಿರ್ಮಾಣ ಮಾಡಿರುವ ಈ ಚಿತ್ರದ ಹಾಡುಗಳ ಚಿತ್ರೀಕರಣ ಇತ್ತೀಚೆಗಷ್ಟೇ ಬ್ಯಾಂಕಾಕ್‌ನಲ್ಲಿ ಪೂರ್ಣಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಬಿರುಸಿನಿಂದ ಸಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. 

ADVERTISEMENT

‘ಎಲ್ಲಾ ಕಲಾವಿದರ ಡಬ್ಬಿಂಗ್ ಪೂರ್ಣವಾಗಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುತ್ತೇವೆ’ ಎಂದು ಪ್ರಕಾಶ್‌ ವೀರ್‌ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.