ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 9 ಮಂದಿ ಆರೋಪಿಗಳು ನಗರದ ಸೆಷನ್ಸ್ ಕೋರ್ಟ್‌ಗೆ ಮಂಗಳವಾರ ಹಾಜರಾದರು. ಎಲ್ಲರ ಹಾಜರಾತಿ ಪಡೆದ ನ್ಯಾಯಾಧೀಶರು, ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದರು.
ಜಾಮೀನು ನೀಡುವಾಗ ಪ್ರತಿ ತಿಂಗಳು ಕೋರ್ಟ್‌ಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಷರತ್ತು ವಿಧಿಸಿದ್ದರಿಂದ ದರ್ಶನ್, ಪವಿತ್ರಗೌಡ, ಪುಟ್ಟಸ್ವಾಮಿ, ರಾಘವೇಂದ್ರ, ನಂದೀಶ್, ನಾಗರಾಜ್, ಲಕ್ಷ್ಮಣ್, ದೀಪಕ್, ರವಿಶಂಕರ್ ಹಾಜರಾಗಿದ್ದರು. ನ್ಯಾಯಾಲಯ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.