ನಟ ದರ್ಶನ್
ನಟ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ಮೊದಲ ಹಾಡು ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಆ.24ರಂದು ಬಿಡುಗಡೆಯಾಗಲಿದೆ.
ಕಳೆದ ಆ.15ರಂದೇ ಈ ಹಾಡು ಬಿಡುಗಡೆಯಾಗಬೇಕಿತ್ತು. ಆದರೆ ದರ್ಶನ್ ಬಂಧನದ ಕಾರಣದಿಂದ ಹಾಡು ಬಿಡುಗಡೆ ಮುಂದೂಡಿಕೆಯಾಗಿತ್ತು.
ಸದ್ಯ ದರ್ಶನ್ ಸಾಮಾಜಿಕ ಮಾಧ್ಯಮಗಳನ್ನು ಅವರ ಪತ್ನಿ ವಿಜಯಲಕ್ಷ್ಮಿ ಅವರೇ ನಿಭಾಯಿಸುತ್ತಿದ್ದು, ‘ದಿ ಡೆವಿಲ್’ ಸಿನಿಮಾ ಬಗ್ಗೆ ಅಪ್‌ಡೇಟ್‌ಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.
‘ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೋಟ್ಯಂತರ ರೂಪಾಯಿ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದದ್ದು ನನ್ನ ಆದ್ಯ ಕರ್ತವ್ಯ.
ಸಿನಿಮಾ ಒಂದು ಮನರಂಜನೆಯ ಮಾಧ್ಯಮ. ಅದನ್ನು ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು’ ಎಂಬ ದರ್ಶನ್ ಸಂದೇಶವನ್ನು ಇತ್ತೀಚೆಗೆ ವಿಜಯಲಕ್ಷ್ಮಿ ಪೋಸ್ಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.