ADVERTISEMENT

ಕಾನ್ ಚಿತ್ರೋತ್ಸವದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮೇ 2022, 11:32 IST
Last Updated 17 ಮೇ 2022, 11:32 IST
   

ಬೆಂಗಳೂರು: ಕಾನ್ ಚಿತ್ರೋತ್ಸವದಲ್ಲಿ ಇದೇ ಮೊದಲ ಬಾರಿಗೆ ಜ್ಯೂರಿಯಾಗಿ ಕಾಣಿಸಿಕೊಂಡಿರುವ ದೀಪಿಕಾ ಪಡುಕೋಣೆ ಅವರ ಫೋಟೊಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ.

75ನೇ ಕಾನ್ ಚಿತ್ರೋತ್ಸವದಲ್ಲಿ ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸಮಿತಿ ದೃಢಪಡಿಸಿತ್ತು.

ಈವರೆಗೆ ಚಿತ್ರೋತ್ಸವ ವೀಕ್ಷಣೆಗೆ ತೆರಳುತ್ತಿದ್ದ ದೀಪಿಕಾ, ಈ ಬಾರಿ ತೀರ್ಪುಗಾರರ ಸಾಲಿನಲ್ಲಿ ಕಾಣಿಸಿಕೊಂಡಿರುವುದು ಅವರ ಅಭಿಮಾನಿಗಳಿಗೂ ಸಂತಸ ತಂದಿದೆ.

ADVERTISEMENT

17 ಮೇ ಮಂಗಳವಾರದಿಂದ ಆರಂಭವಾಗುತ್ತಿರುವ ಕಾನ್ ಚಿತ್ರೋತ್ಸವ, 28ರ ವರೆಗೆ ನಡೆಯಲಿದೆ.

ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಕುರಿತು ಕಿರು ವಿಡಿಯೊ ಒಂದನ್ನು ದೀಪಿಕಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.