ADVERTISEMENT

ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ಜಾಕ್ವೆಲಿನ್ ಅರ್ಜಿ, 22ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2022, 11:23 IST
Last Updated 20 ಡಿಸೆಂಬರ್ 2022, 11:23 IST
ಜಾಕ್ವೆಲಿನ್ ಫರ್ನಾಂಡೀಸ್‌
ಜಾಕ್ವೆಲಿನ್ ಫರ್ನಾಂಡೀಸ್‌   

ನವದೆಹಲಿ: ಆರೋಪಿ ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದಂತೆ ₹ 200 ಕೋಟಿ ಹಣಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರು ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಡಿಸೆಂಬರ್‌ 22ಕ್ಕೆ ಮುಂದೂಡಿದೆ.

ಜನವರಿ 23ರಿಂದ ಬರ್ಲಿನ್ ಪ್ರಯಾಣಿಸಲು ಅನುಮತಿ ಕೋರಿ ಜಾಕ್ವೆಲಿನ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು, ಜಾಕ್ವೆಲಿನ್ ಅವರ ಪ್ರಯಾಣದ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಇ.ಡಿಗೆ ನೋಟಿಸ್ ನೀಡಿದ್ದಾರೆ.

ಪ್ರಕರಣದಲ್ಲಿ ಬಂಧಿಯಾಗಿದ್ದ ಜಾಕ್ವೆಲಿನ್‌ಗೆ ನ್ಯಾಯಾಂಗ ನ.15ರಂದು ಸಾಮಾನ್ಯ ಜಾಮೀನು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.