ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ.
ದೆಹಲಿಯಲ್ಲಿ ವಕೀಲರೊಬ್ಬರು ಹಾಗೂ ಉತ್ತರಪ್ರದೇಶದಲ್ಲಿ ಐಎಫ್‌ಎಸ್‌ಒ ಸಂಘಟನೆ ನೀಡಿರುವ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಲೀನಾ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಸ್ಟರ್ ಹಂಚಿಕೊಂಡಿದ್ದು ಅದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯು ಸಿಗರೇಟ್ ಸೇದುತ್ತಿರುವ ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.
ಈ ಪೋಸ್ಟರ್ ಹಾಗೂ ಲೀನಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.
ಕೆನಾಡದ ಅಗಾ ಖಾನ್ ಮ್ಯೂಸಿಯಂನಲ್ಲಿ ‘ರಿದಮ್ಸ್ ಆಫ್ ಕೆನಡಾ‘ ಸಂಸ್ಥೆ ಈ ಸಾಕ್ಷ್ಯಚಿತ್ರವನ್ನು ಲಾಂಚ್ ಮಾಡಿದೆ. ಈ ಚಿತ್ರವನ್ನು ನಿರ್ಬಂಧಿಸಬೇಕು ಎಂದು ಇಲ್ಲಿನ ಹಿಂದೂ ಸಂಘಟನೆಗಳು ಕೆನಡಾ ರಾಯಭಾರಿ ಕಚೇರಿಗೆ ಮನವಿ ಸಲ್ಲಿಸಿವೆ. ಲೀನಾ ಅವರು ಪ್ರಸ್ತುತ ಕೆನಡಾದಲ್ಲಿ ನೆಲೆಸಿದ್ದಾರೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.