ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟಿ ವಹೀದಾ ರೆಹಮಾನ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ನವದೆಹಲಿ: ಹಿರಿಯ ಕಲಾವಿದೆ ಮತ್ತು ಚಿತ್ರನಟಿ ವಹೀದಾ ರೆಹಮಾನ್ ಅವರು 53ನೇ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
2022ನೇ ಸಾಲಿನಲ್ಲಿ ಬಿಡುಗಡೆಯಾದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಕನ್ನಡ ಚಿತ್ರ ಪಶಸ್ತಿಯನ್ನು ‘777 ಚಾರ್ಲಿ’ ಪಡೆದಿದೆ.
‘ಗಂಗೂಬಾಯಿ ಕಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್ ನಟಿ ಅಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ‘ಪುಷ್ಪ’ ಚಿತ್ರದ ನಟನೆಗೆ ಅಲ್ಲು ಅರ್ಜುನ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ.
ಅತ್ಯುತ್ತಮ ನೃತ್ಯ ನಿರ್ದೇಶನ(ನಾಟು ನಾಟು), ಸಾಹಸ ನಿರ್ದೇಶನ ಮತ್ತು ಸ್ಪೆಷಲ್ ಎಫೆಕ್ಟ್ ವಿಭಾಗದಲ್ಲಿ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಚಿತ್ರ ಆಯ್ಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.