ಬೆಂಗಳೂರು: ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಟನೆಯ ‘ಓ ಮೈ ಲವ್’ ಚಿತ್ರದ ಖಳನಾಯಕನಾಗಿ ಮಗಧೀರ ಖ್ಯಾತಿಯ ದೇವ್ಗಿಲ್ ನಟಿಸುತ್ತಿದ್ದು, ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ.
ಈ ಹಂತದ ಚಿತ್ರೀಕರಣದ ವೇಳೆದೇವ್ಗಿಲ್ ಹಾಗೂ ಅಕ್ಷಿತ್ ಶಶಿಕುಮಾರ್ ನಡುವಿನ ಸಾಹಸ ದೃಶ್ಯಗಳನ್ನು ರಿಯಲ್ ಸತೀಶ್ ಅವರ ಸಾರಥ್ಯದಲ್ಲಿ ಚಿತ್ರೀಕರಿಸಿಕೊಳ್ಳಲಾಗಿದೆ. ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಕೀರ್ತಿ ಕಲ್ಕೆರೆ ನಾಯಕಿಯಾಗಿದ್ದಾರೆ. ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಚಿತ್ರೀಕರಣದಲ್ಲಿ ನಾಯಕಿ ಕೀರ್ತಿ ಕಲ್ಕೆರೆ, ಎಸ್.ನಾರಾಯಣ್, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ, ಪೃಥ್ವಿರಾಜ್ ಅವರೂ ಭಾಗವಹಿಸಿದ್ದರು. ಇದರೊಂದಿಗೆ ಚಿತ್ರದ ಶೇ 40ರಷ್ಟು ಚಿತ್ರೀಕರಣ ಮುಗಿದಿದೆ. ಚಿತ್ರಕ್ಕೆ ಚರಣ್ ಅರ್ಜುನ್ ಅವರ ಸಂಗೀತ, ರಿಯಲ್ ಸತೀಶ್ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿಕ್ ಅವರ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ. ಸಾಧುಕೋಕಿಲ, ಪವಿತ್ರಾ ಲೋಕೇಶ್, ರವಿ ರಾಮ್ಕುಮಾರ್ ಹಾಗೂ ಇತರರು ತಾರಾ ಬಳಗದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.