ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳನ್ನೇ ಕಥೆಯಾಗಿಸಿಕೊಂಡಿರುವ ‘ದೇವಸಸ್ಯ’ ಚಿತ್ರದ ಟೈಟಲ್ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗಡೆ ಬಂಡವಾಳ ಹೂಡಿರುವ ಚಿತ್ರಕ್ಕೆ ಕಾರ್ತೀಕ್ ಭಟ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
‘ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ. 1995ರಲ್ಲಿ ನಡೆಯುವ ಕಥೆಯಾಗಿದ್ದರಿಂದ ಆ ರೀತಿ ಲೊಕೇಶನ್ ಎಲ್ಲಿಯೂ ಸಿಗಲಿಲ. ಹಾಗಾಗಿ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ. ದೇವಸಸ್ಯ ಏನು ಎನ್ನುವುದೇ ಚಿತ್ರ ನೋಡಿದ ನಂತರವೇ ಗೊತ್ತಾಗುತ್ತದೆ’ ಎಂದರು ನಿರ್ದೇಶಕರು.
ಕನ್ನಡ, ತೆಲುಗು, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರ ನಿರ್ಮಾಣಗೊಳ್ಳುತ್ತಿದೆ. ರಾಜು ಎನ್.ಎಂ. ಛಾಯಾಚಿತ್ರಗ್ರಹಣ, ಹರಿ ಅಜಯ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.