ADVERTISEMENT

ಶೀಘ್ರದಲ್ಲೇ ಡೆವಿಲ್ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ: ಚಿತ್ರತಂಡದಿಂದ ಅಪ್‌ಡೇಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2025, 5:26 IST
Last Updated 6 ನವೆಂಬರ್ 2025, 5:26 IST
<div class="paragraphs"><p>ನಟ ದರ್ಶನ್</p></div>

ನಟ ದರ್ಶನ್

   

ಚಿತ್ರ: ಎಕ್ಸ್ ಖಾತೆ

ನಟ ದರ್ಶನ್ ಅಭಿಮಾನಿಗಳಿಗೆ ಡೆವಿಲ್ ಚಿತ್ರತಂಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ಈ ಸಿನಿಮಾದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಈಗ ಮತ್ತೊಂದು ಹಾಡಿನ ಬಗ್ಗೆ ಚಿತ್ರತಂಡ ಅಪ್‌ಡೇಟ್‌ ನೀಡಿದೆ. ಶೀಘ್ರದಲ್ಲೇ ಮೂರನೇ ಹಾಡು ಬಿಡುಗಡೆಯಾಗಲಿದೆ ಎಂದು ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ADVERTISEMENT

ಡೆವಿಲ್‌ ಸಿನಿಮಾದ ‘ಒಂದೇ ಒಂದು ಸಲ’ ಹಾಡು ಅಕ್ಟೋಬರ್ 10ರಂದು ಬಿಡುಗಡೆಯಾಗಿತ್ತು. ಇದಕ್ಕೂ ಮೊದಲು ‘ಇದ್ರೆ ನೆಮ್ದಿಯಾಗಿರಬೇಕು’ ಎಂಬ ಹಾಡನ್ನು ಕೂಡ ಚಿತ್ರತಂಡ ಬಿಡುಗಡೆ ಮಾಡಿತ್ತು. ಇದೀಗ ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

ಡೆವಿಲ್‌ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.

ಶ್ರೀ ಜೈ ಮಾತಾ ಕಂಬೈನ್ಸ್‌ ಲಾಂಛನದಲ್ಲಿ ಜೆ. ಜಯಮ್ಮ ನಿರ್ಮಾಣ ಮಾಡಿರುವ ‘ಡೆವಿಲ್‌’ನ ಚಿತ್ರೀಕರಣ ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ನಡೆದಿದೆ. ಸುಧಾಕರ್ ಎಸ್.ರಾಜ್ ಛಾಯಾಚಿತ್ರಗ್ರಹಣ, ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ.ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.