
ನಟ ದರ್ಶನ್ ಅಭಿಮಾನಿಗಳಿಗೆ ‘ದಿ ಡೆವಿಲ್’ ಚಿತ್ರತಂಡ ಅಪ್‌ಡೇಟ್ ಒಂದನ್ನು ನೀಡಿದೆ. ಡಿಸೆಂಬರ್ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ‘ದಿ ಡೆವಿಲ್’ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಈ ಕುರಿತು ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ‘ಪ್ರೇಕ್ಷಕರ ಗಮನಕ್ಕೆ. ಸೆಲೆಬ್ರಿಟಿಗಳ ಹಾಗೂ ಪ್ರೇಕ್ಷಕ ಪ್ರಭುಗಳ ಒತ್ತಾಯದ ಮೇರೆಗೆ ‘ದಿ ಡೆವಿಲ್’ ಸಿನಿಮಾ 12/12/2025ರಂದು ಬಿಡುಗಡೆ ಆಗಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿ ಅಂದರೆ, ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ ಬರಲಿದೆ. ನಿಮ್ಮಪ್ರೀತಿ ಅಭಿಮಾನವೆ ನಮ್ಮ ಶ್ರೀರಕ್ಷೆ’ ಎಂದು ಬರೆದುಕೊಂಡಿದೆ.
ಡೆವಿಲ್ ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.