
ವಿಜಯಲಕ್ಷ್ಮಿ, ದರ್ಶನ್
ಚಿತ್ರ: ಯ್ಯೂಟೂಬ್
ನಟ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗುತ್ತಿದೆ. ಹೀಗಾಗಿ ಡೆವಿಲ್ ಚಿತ್ರತಂಡ ಅಭಿಮಾನಿಗಳಿಗೆ ಒಂದೊಂದೆ ಅಪ್‌ಡೇಟ್‌ಗಳನ್ನು ನೀಡುತ್ತಿದೆ. ಈಗ ದರ್ಶನ್ ಅಭಿಮಾನಿಗಳ ಜೊತೆಗೆ ಡೆವಿಲ್ ಚಿತ್ರತಂಡ ಸಂಭ್ರಮಾಚರಣೆ ಮಾಡಿದೆ. ಶ್ರೀ ಜೈಮಾತಾ ಕಂಬೈನ್ಸ್ ಸಾಮಾಜಿಕ ಮಾಧ್ಯಮದಲ್ಲಿ ಸಂಭ್ರಮಾಚರಣೆಯ ವಿಡಿಯೊ ಒಂದನ್ನು ಹಂಚಿಕೊಂಡಿದೆ.
ಡೆವಿಲ್ ಚಿತ್ರತಂಡ ನವೆಂಬರ್ 16ರಂದು ‘ಅಲೊಹೊಮೋರ ದಿ ಟ್ರು ಎಂಪೈರರ್’ ಹಾಡಿನ ಬಿಡುಗಡೆಯ ಸಮಾರಂಭವನ್ನು ಹಮ್ಮಿಕೊಂಡಿತ್ತು. ಆ ಕಾರ್ಯಕ್ರಮದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಿರ್ದೇಶಕ ಮಿಲನಾ ಪ್ರಕಾಶ್, ದಿನಕರ್ ತೂಗುದೀಪ್ ಹಾಗೂ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿದ್ದರು.
ಇನ್ನು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ’ಈ ಹಾಡು ನನಗೆ ತುಂಬಾ ಇಷ್ಟ. ತುಂಬಾ ಇಷ್ಟಪಟ್ಟು ಈ ಸಿನಿಮಾವನ್ನು ಮಾಡಿದ್ದಾರೆ. ದಯವಿಟ್ಟು ಎಲ್ಲರೂ ಬೆಂಬಲ ನೀಡಬೇಕು. ಅಂದರೆ ಈ ಸಿನಿಮಾಗೆ ಕೊಂಚ ಜಾಸ್ತಿ ಪ್ರೀತಿ ತೋರಿಸಬೇಕು’ ಎಂದು ವೇದಿಕೆ ಮೇಲೆ ಮಾತನಾಡಿದ್ದಾರೆ.
ಈಗಾಗಲೇ ಡೆವಿಲ್ ಸಿನಿಮಾದ ಮೂರು ಹಾಡುಗಳು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಡೆವಿಲ್ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.