ADVERTISEMENT

Sandalwood: ಶಂಕರ್‌ ಆದ ‘ಡಾಲಿ’

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 23:30 IST
Last Updated 16 ಫೆಬ್ರುವರಿ 2026, 23:30 IST
ಧನಂಜಯ 
ಧನಂಜಯ    

ನಿರ್ದೇಶಕ ಹೇಮಂತ್‌ ಎಂ.ರಾವ್‌ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ನಟ ಧನಂಜಯ ಅವರ ಪಾತ್ರವನ್ನು ಚಿತ್ರತಂಡ ಪರಿಚಯಿಸಿದೆ. 

‘ಶಂಕರ್‌’ ಎನ್ನುವ ಪಾತ್ರಕ್ಕೆ ಧನಂಜಯ ಬಣ್ಣಹಚ್ಚಿದ್ದು, ಇದೇ ವರ್ಷ ಸಿನಿಮಾ ಬಿಡುಗಡೆಯಾಗುವ ಮುನ್ಸೂಚನೆಯನ್ನೂ ಚಿತ್ರತಂಡ ನೀಡಿದೆ. 

ಸಿನಿಮಾದಲ್ಲಿ ಧನಂಜಯಗೆ ಜೋಡಿಯಾಗಿ ನಟಿ ಪ್ರಿಯಾಂಕಾ ಮೋಹನ್‌ ನಟಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಹಾಕಲಾಗಿರುವ ಸೆಟ್‌ನಲ್ಲಿ ಚಿತ್ರೀಕರಣ ನಡೆದಿದೆ. ಫೆಬ್ರುವರಿ–ಮಾರ್ಚ್‌ನಲ್ಲಿ ಶೂಟಿಂಗ್‌ ಪೂರ್ಣಗೊಳಿಸಲು ಹೇಮಂತ್‌ ಯೋಜನೆ ಹಾಕಿಕೊಂಡಿದ್ದಾರೆ. ನಟ ಶಿವರಾಜ್‌ಕುಮಾರ್‌, ಧನಂಜಯ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ 70ರ ದಶಕದ ಶೈಲಿಯಲ್ಲಿರಲಿದೆ. ಸಿನಿಮಾವನ್ನು ಡಾ. ವೈಶಾಖ್ ಜೆ ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ತೆರೆಕಾಣಲಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.