
ನಟ ಧನುಷ್
ನಟಿ ಮೃಣಾಲ್ ಠಾಕೂರ್ ಅವರೊಂದಿಗೆ ತಮಿಳು ನಟ ಮತ್ತು ನಿರ್ಮಾಪಕ ಧನುಷ್ ಹಸೆಮಣೆ ಏರಲಿದ್ದಾರೆ ಎಂಬ ವದಂತಿಗಳ ನಡುವೆ ಪುತ್ರರೊಂದಿಗೆ ನಟ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಇದೇ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನಟನ ಜೊತೆಗೆ ಪುತ್ರರಾದ ಲಿಂಗ ಮತ್ತು ಯಾತ್ರಾ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೃಣಾಲ್ ಠಾಕೂರ್ ಹಾಗೂ ಧನುಷ್ ಇಬ್ಬರು ಡೇಟಿಂಗ್‌ನಲ್ಲಿದ್ದರು ಎಂಬ ವದಂತಿಗಳು ಕಳೆದ ವರ್ಷದಿಂದ ಹರಿದಾಡುತ್ತಿವೆ.
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಇಬ್ಬರು ಪ್ರೇಮಿಗಳ ದಿನ ಫೆಬ್ರುವರಿ 14ರಂದು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ನಡುವೆ ನಟ ದಿಢೀರ್ ಎಂಬಂತೆ ತಿಮ್ಮಪ್ಪನ ದರ್ಶನ ಪಡೆದಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸದ್ಯ ನಟಿ ಮೃಣಾಲ್ ಠಾಕೂರ್ ಅವರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೊಂದೆಡೆ ಧನುಷ್ ಅವರು ಮೃಣಾಲ್ ಅವರನ್ನು ಮದುವೆಯಾಗುತ್ತಿಲ್ಲ ಎಂದು ನಟನ ಆಪ್ತ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.