
ನಟ ಧನ್ವೀರ್
ಚಿತ್ರ: ಇನ್‌ಸ್ಟಾಗ್ರಾಂ
‘ಕೈವ’ ಬಳಿಕ ಧನ್ವೀರ್ ನಟನೆಯಲ್ಲಿ ಮೂಡಿಬರುತ್ತಿರುವ ‘ಹಯಗ್ರೀವ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಇದೀಗ ಹಯಗ್ರೀವ ಸಿನಿಮಾದ ಟೀಸರ್ ಬಿಡುಗಡೆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಈ ಕುರಿತು ಆನಂದ್ ಆಡಿಯೊ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ‘ಇದೇ ಜನವರಿ 23ರಂದು ಬೆಳಿಗ್ಗೆ 10.05ಕ್ಕೆ ಹಯಗ್ರೀವ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ’ ಎಂದು ಬರೆಯಲಾಗಿದೆ. ಇದು ನಟ ಧನ್ವೀರ್ ಅವರ ಐದನೇ ಸಿನಿಮಾವಾಗಿದೆ.
ಸಮೃದ್ಧಿ ಮಂಜುನಾಥ್ ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ರಘುಕುಮಾರ್ ಒ.ಆರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್‌ಗೆ ಜೋಡಿಯಾಗಿ ‘ಸಲಗ’ ಖ್ಯಾತಿಯ ಸಂಜನಾ ಆನಂದ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಮತ್ತೊಬ್ಬ ನಾಯಕನಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು ಎಂದಿದೆ ಚಿತ್ರತಂಡ.
‘ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್ ಇದೆ. ಪ್ರೀತಿ, ಭಾವನಾತ್ಮಕ ಅಂಶಗಳ ಜೊತೆಗೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆದಿದೆ. ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.