ಮಾತು ಮಾತೊಂದು ಮನಸನ್ನ... ಕೂಡಿಸೋದೆ ನಿನ್ನ ಕೆಲಸಾನ...
ಹೀಗೊಂದು ಹಾಡು ವಿಜಯ ಪ್ರಕಾಶ್ ಕಂಠದಲ್ಲಿ ಮೂಡಿಬಂದಿದೆ. ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕಾಗಿ ಅವರು ಈ ಹಾಡು ಹಾಡಿದ್ದಾರೆ. ‘ಗುಳ್ಟು’ ಸಿನಿಮಾ ಖ್ಯಾತಿಯ ನವೀನ್ ಹಾಗೂ ಐಶಾನಿ ಶೆಟ್ಟಿ ಜೋಡಿಯಾಗಿ ನಟಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗೌಸ್ ಪೀರ್ ಈ ಹಾಡಿನ ಸಾಹಿತ್ಯ ಬರೆದಿದ್ದಾರೆ.ಹೈಪರ್ ಶೈಲಿಯ ಸಿನಿಮಾವಾಗಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಈ ಹಿಂದಿ ಪೂರಿ ಜಗನ್ನಾಥ್ ಜೊತೆ ಕೆಲಸ ಮಾಡಿದ್ದ ಶ್ರೀಧರ್ ಷಣ್ಮುಖ ಆ್ಯಕ್ಷನ್ ಕಟ್ ಹೇಳಿದ್ದು, ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಬಂಡವಾಳ ಹೂಡಿದ್ದಾರೆ. ಕೀರ್ತನ್ ಪೂಜಾರಿ ಛಾಯಾಗ್ರಹಣ, ಗೌಸ್ ಪೀರ್, ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.