
ಹಿರಿಯ ನಟ ಧರ್ಮೇಂದ್ರ
ಮುಂಬೈ: ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯದ ಕುರಿತು ಸುಳ್ಳು ಸುದ್ದಿ ಬಿತ್ತರಿಸುವುದನ್ನು ನಿಲ್ಲಿಸಿ ಎಂದು ಮಂಗಳವಾರ ಧರ್ಮೇಂದ್ರ ಅವರ ಪುತ್ರಿ ಇಶಾ ದೇವಲ್ ಮನವಿ ಮಾಡಿದ್ದಾರೆ.
89 ವರ್ಷದ ಹಿರಿಯ ನಟ ಮುಂಬೈ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಅವರ ಆರೋಗ್ಯದ ಕುರಿತು ಸುಳ್ಳು ವದಂತಿಗಳು ಹರಡುತ್ತಿವೆ. ಈ ನಡುವೆ ಅವರು ಸ್ಥಿರವಾಗಿದ್ದಾರೆ ಎಂದು ಪುತ್ರಿಇಶಾ ದೇವಲ್ ಸಾಮಾಜಿಕ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡಿದ್ದಾರೆ.
'ಮಾಧ್ಯಮಗಳು ಅತಿರೇಕದಲ್ಲಿದ್ದು ಸುಳ್ಳು ಸುದ್ದಿ ಹರಡುತ್ತಿವೆ. ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ನಮ್ಮ ತಂದೆ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಕ್ಕೆ ಧನ್ಯವಾದಗಳು’ ಎಂದು ಇಶಾ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
ಧರ್ಮೇಂದ್ರ ಅವರ ಆರೋಗ್ಯದ ಕುರಿತು ಹಿರಿಯ ನಟಿ ಹಾಗೂ ಸಂಸದೆ ಹೇಮಾ ಮಾಲಿನಿ ಕೂಡಾ ಪ್ರತಿಕ್ರಿಯಿಸಿದ್ದಾರೆ.
‘ಈಗ ನಡೆಯುತ್ತಿರುವ ಘಟನೆಗಳು ಕ್ಷಮಿಸಲಾಗದವು. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಮಾಧ್ಯಮಗಳು ಸುಳ್ಳು ಸುದ್ದಿ ಹರಡಲ ಹೇಗೆ ಸಾಧ್ಯ? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿಯುತ ನಡೆಯಾಗಿದೆ. ದಯವಿಟ್ಟು ಕುಟುಂಬದ ಖಾಸಗಿತನಕ್ಕೆ ಗೌರವ ನೀಡಿ’ ಎಂದು ಮಾಲಿನಿ ಎಕ್ಸ್ ಮೂಲಕ ಪೋಸ್ಟ್ ಮಾಡಿದ್ದಾರೆ .
ಮಾಲಿನಿ, ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಸೇರಿದಂತೆ ಇಡೀ ಡಿಯೋಲ್ ಕುಟುಂಬ ಸದ್ಯ ಆಸ್ಪತ್ರೆಯಲ್ಲಿದೆ. ಸೂಪರ್‌ಸ್ಟಾರ್‌ಗಳಾದ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಡಿಯೋಲ್ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಜೊತೆಗೆ ನಟ ಗೋವಿಂದ ಕೂಡ ಆಸ್ಪತ್ರೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.