ಚಿತ್ರ ಕೃಪೆ: @KvnProductions
ನಟ ಧ್ರುವ ಸರ್ಜಾ ಹುಟ್ಟು ಹಬ್ಬದ ಪ್ರಯುಕ್ತ ಕೆವಿಎನ್ ಪ್ರೊಡಕ್ಷನ್ 'ಕೆಡಿ' ಚಿತ್ರದ ಸಣ್ಣ ಝಲಕ್ ಒಂದನ್ನು ಬಿಡುಗಡೆ ಮಾಡಿ 'ಕೆಡಿ ದಿ ಡೆವಿಲ್ ಜತೆ ರಕ್ತ ಮತ್ತು ಹಳೆ ಸೇಡು ತುಂಬಿದೆ. ಇತಿಹಾಸವನ್ನು ಕೆಂಪು ಬಣ್ಣಕ್ಕೆ ತಿರುಗಿಸೋಣ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದು ಶುಭಕೋರಿದ್ದಾರೆ.
ಎ.ಪಿ. ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾದ ಬಳಿಕ ಪ್ರೇಮ್ ನಿರ್ದೇಶಿಸುತ್ತಿರುವ ಕೆಡಿ ಸಿನಿಮಾದಲ್ಲಿ ನಟ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.
1970ರ ಕಾಲಘಟ್ಟದಲ್ಲಿ ನಡೆಯುವ ಕಥೆ ಹೊಂದಿರುವ ಚಿತ್ರದಲ್ಲಿ ಧ್ರುವ ಸರ್ಜಾ, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ಸಂಜಯ್ ದತ್, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಅನೇಕ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.