ADVERTISEMENT

Kannada Movies: ‘KD’ಯಲ್ಲಿ ಧ್ರುವ ಲುಕ್‌

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 0:30 IST
Last Updated 7 ಅಕ್ಟೋಬರ್ 2025, 0:30 IST
ಧ್ರುವ ಸರ್ಜಾ 
ಧ್ರುವ ಸರ್ಜಾ    

2025ರ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘KD’ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಧ್ರುವ ಸರ್ಜಾ ಜನ್ಮದಿನದಂದು (ಅ.6) ಅವರ ಪಾತ್ರದ ಹೊಸ ಪೋಸ್ಟರ್‌ ಬಿಡುಗಡೆಯಾಗಿದ್ದು, ರಗಡ್‌ ಲುಕ್‌ನಲ್ಲಿ ಬಿರಿಯಾನಿ ತಿನ್ನುತ್ತಾ ಧ್ರುವ ಕಾಣಿಸಿಕೊಂಡಿದ್ದಾರೆ. 

ಚಿತ್ರತಂಡ ಬಿಡುಗಡೆ ದಿನಾಂಕವನ್ನು ಇನ್ನಷ್ಟೇ ಘೋಷಿಸಬೇಕಿದ್ದು, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ. ಸಿನಿಮಾದಲ್ಲಿ ಸುದೀಪ್‌ ಅವರೂ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ‘ಏಕ್‌ ಲವ್‌ ಯಾ’ ಸಿನಿಮಾ ನಂತರ ಪ್ರೇಮ್ ನಿರ್ದೇಶನದ ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದ್ದು, ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್‌ ದತ್‌, ರವಿಚಂದ್ರನ್, ಶಿಲ್ಪಾ ಶೆಟ್ಟಿ, ರಮೇಶ್‌ ಅರವಿಂದ್‌ ಚಿತ್ರದ ತಾರಾಬಳಗದಲ್ಲಿದ್ದಾರೆ. ‘KD’–ಕಾಳಿದಾಸ ಸಿನಿಮಾವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣ ಮಾಡಿದೆ. 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರಲ್ಲಿದೆ. ಚಿತ್ರಕ್ಕಾಗಿ ಸುಮಾರು 180 ದಿನ ಚಿತ್ರೀಕರಣ ನಡೆಸಿದ್ದ ಚಿತ್ರತಂಡ ಹಂಗರಿ ರಾಜಧಾನಿ ಬುಡಾಪೆಸ್ಟ್‌ನಲ್ಲಿ ಚಿತ್ರದ ಬ್ಯಾಗ್ರೌಂಡ್‌ ಸ್ಕೋರ್‌ ಕೆಲಸವನ್ನು ನಡೆಸಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT