ಮುಂಬೈ: ಇನ್ಸ್ಟಾಗ್ರಾಮ್ನಲ್ಲಿ ಆಗಾಗ್ಗೆ ಹಾಟ್ ಫೋಟೊಗಳನ್ನು ಹಾಕುತ್ತಾ ಯುವಕರ ಎದೆಗೆ ಕಿಚ್ಚು ಹಚ್ಚುವ ದಿಶಾ ಪಟಾನಿ, ಈಗ ಮತ್ತೊಂದು ಬೀಚ್ ಉಡುಗೆಯಲ್ಲಿ ಅಭಿಮಾನಿಗಳಿಗೆ ದರ್ಶನ ಕೊಟ್ಟಿದ್ದಾರೆ.
ಬುಧವಾರ ಸಂಜೆ, ನಟಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿಬಿಕಿನಿ ಫೋಟೊವೊಂದನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿನಿಮಾಗಳ ಶೂಟಿಂಗ್ ಅಥವಾ ಜಿಮ್ನಲ್ಲಿ ಬ್ಯುಸಿಯಾಗಿರುವ ದಿಶಾ, ಬೀಚ್ಗಳಲ್ಲಿ ಕಾಲ ಕಳೆಯಲು ಇಷ್ಟಪಡುತ್ತಾರೆ. ಹಾಗಾಗಿ, ಬಹುತೇಕ ಸಂದರ್ಭದಲ್ಲಿ ಬೀಚ್ನಲ್ಲಿ ಬಿಕಿನಿ ಉಡುಗೆಗಳ ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುತ್ತಿರುತ್ತಾರೆ.
ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್ ಜೊತೆಯಾಗಿ ಮೋಹಿತ್ ಸೂರಿ ಅವರ ಆಕ್ಷನ್ ಥ್ರಿಲ್ಲರ್ ಮಲಂಗ್ ಚಿತ್ರದಲ್ಲಿ ದಿಶಾ ಪಟಾನಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಪ್ರಭು ದೇವ ನಿರ್ದೆಶನದ ‘ರಾಧೆ’ಅವರ ಮುಂಬರುವ ಚಿತ್ರವಾಗಿದೆ. ಈ ಮೂಲಕ ಎರಡನೇ ಬಾರಿಗೆ ಸಲ್ಮಾನ್ ಖಾನ್ ಜೊತೆ ದಿಶಾ ಪಟಾನಿ ಬಣ್ಣ ಹಚ್ಚುತ್ತಿದ್ದಾರೆ. 2019ರ ಭರತ್ ಚಿತ್ರದಲ್ಲಿ ಈ ಇಬ್ಬರು ಜೊತೆಯಾಗಿ ನಟಿಸಿದ್ದರು. ಇದೇ ಚಿತ್ರದಲ್ಲಿ ಕತ್ರಿನಾ ಕೈಫ್ ಮತ್ತು ಟಬು ಕೂಡ ಕಾಣಿಸಿಕೊಂಡಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.