ADVERTISEMENT

‘ಪದವಿಪೂರ್ವ’ಕ್ಕೆ ದಿವ್ಯ ಉರುಡುಗ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 19:30 IST
Last Updated 2 ಡಿಸೆಂಬರ್ 2021, 19:30 IST
ದಿವ್ಯ ಉರುಡುಗ
ದಿವ್ಯ ಉರುಡುಗ   

ಬಿಗ್‌ಬಾಸ್‌ ಖ್ಯಾತಿಯ ದಿವ್ಯ ಉರುಡುಗ ಇದೀಗ ‘ಪದವಿಪೂರ್ವ’ಕ್ಕೆ ಕಾಲಿಟ್ಟಿದ್ದಾರೆ. ಯೋಗರಾಜ್‌ ಭಟ್‌ ಅವರ ತಂಡ ಸೇರಿಸಿಕೊಂಡಿರುವ ದಿವ್ಯ, ಈ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್‌ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಈ ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣವು ಕಳೆದ ತಿಂಗಳಷ್ಟೇ ಪೂರ್ಣಗೊಂಡಿದೆ. ದಿವ್ಯ ನಟಿಸಲಿರುವ ಭಾಗದ ಚಿತ್ರೀಕರಣವು ಬೆಂಗಳೂರು ಹಾಗೂ ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರು ಆಗಲಿದ್ದು, ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಕಲ ಸಿದ್ಧತೆ ಆರಂಭಿಸಿದೆ.

ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯರು. ಪದವಿಪೂರ್ವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು ಯೋಗರಾಜ್ ಭಟ್ ಸಾಹಿತ್ಯವಿದೆ. ಸಂತೋಷ್ ರೈ ಪಾತಾಜೆಛಾಯಾಗ್ರಾಹಣ ಹಾಗೂ ಮಧು ತುಂಬಕೆರೆಯ ಸಂಕಲನ ಈ ಚಿತ್ರಕ್ಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.