‘ದೃಶ್ಯ' ಚಿತ್ರ2014ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ದೃಶ್ಯ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಕಳೆದ 15 ಗಂಟೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿರುವ ಈ ಚಿತ್ರ ಡಿಸೆಂಬರ್ 10ರಂದು ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.
ಮಲಯಾಳಂನಲ್ಲಿ ನಟ ಮೋಹನ್‌ಲಾಲ್ ನಟಿಸಿದ್ದ ‘ದೃಶ್ಯಂ–2’ ಚಿತ್ರದ ರಿಮೇಕ್ ಇದಾಗಿದೆ. ಇತ್ತೀಚೆಗೆ ಮಲಯಾಳಂನಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಹಿಟ್ ಆಗಿದೆ.
ಕನ್ನಡದಲ್ಲೂ ಎರಡನೇ ಭಾಗ ರಿಮೇಕ್ ಆಗಿದೆ. ಮೊದಲ ಭಾಗದಲ್ಲಿ ನಟಿಸಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಇದರಲ್ಲಿ ನಾಯಕರಾಗಿ ನಟಿಸಿದ್ದಾರೆ. ವಿಶೇಷವೆಂದರೆ ಹಿರಿಯ ನಟ ಅನಂತನಾಗ್ ಕೂಡಾ ಚಿತ್ರತಂಡ ಸೇರಿಕೊಂಡಿದ್ದಾರೆ.
ಟ್ರೈಲರ್ ಬಿಡುಗಡೆಯಾದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ರವಿಚಂದ್ರನ್‌ಈ ಸಿನಿಮಾ ಕೂಡ ಹಿಟ್ ಆಗಲಿದೆ. ಇದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
‘ದೃಶ್ಯ’ ಮೊದಲ ಭಾಗದಲ್ಲಿ ನಾಯಕಿಯಾಗಿ ನಟಿಸಿದ್ದ ನವ್ಯ ನಾಯರ್ ಈ ಚಿತ್ರದಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ. ರವಿಚಂದ್ರನ್ ಅವರ ಪುತ್ರಿ ಪಾತ್ರದಲ್ಲಿ ಆರೋಹಿ ನಾರಾಯಣ್ ಕಾಣಿಸಿಕೊಂಡಿದ್ದಾರೆ. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯುಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇ4 ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸಿ.ವಿ.ಸಾರಥಿ. ಜೀತು ಜೋಸೆಫ್ ಕಥೆ ಬರೆದಿದ್ದು, ಪಿ.ವಾಸು ನಿರ್ದೇಶನ ಮಾಡಿದ್ದಾರೆ. ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.