ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ರಿಯಾಲಿಟಿ ಶೋ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಕುಮಾರ್ ಹಾಗೂ ಆರ್.ವಿ.ಯುವರಾಜ್ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ.
‘ಕಾಟನ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯಲ್ಲಿ ಕೆಲ ಮಾಹಿತಿಗಳು ಸಿಕ್ಕಿವೆ. ಅದನ್ನು ಆಧರಿಸಿ ಮೂವರಿಗೂ ನೋಟಿಸ್ ನೀಡಲಾಗಿದೆ. ಶನಿವಾರ ಬೆಳಿಗ್ಗೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬರುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ’ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.
ಇದನ್ನೂ ಓದಿ...ಜೆಲ್ಲಿ ರೂಪದಲ್ಲೂ ಡ್ರಗ್ಸ್ ಮಾರಾಟ: ಇಬ್ಬರ ಬಂಧನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.