ADVERTISEMENT

ಡ್ರಗ್ಸ್ ದಂಧೆ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 16:35 IST
Last Updated 2 ಸೆಪ್ಟೆಂಬರ್ 2020, 16:35 IST
ರಾಗಿಣಿ ದ್ವಿವೇದಿ (ಸಂಗ್ರಹ ಚಿತ್ರ)
ರಾಗಿಣಿ ದ್ವಿವೇದಿ (ಸಂಗ್ರಹ ಚಿತ್ರ)   

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್ ನೀಡಿರುವ ಅಧಿಕಾರಿಗಳು, ಗುರುವಾರ ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಡ್ರಗ್ಸ್ ದಂಧೆ ಸಂಬಂಧ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳ ಜೊತೆಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಇದರ ಅನ್ವಯ ರಾಗಿಣಿ ಆಪ್ತರೊಬ್ಬರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಅವರು ನೀಡಿರುವ ಮಾಹಿತಿ ಮೇರೆಗೆ ರಾಗಿಣಿ ಅವರಿಗೆ ನೋಟಿಸ್ ನೀಡಲಾಗಿದೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್, ‘ಡ್ರಗ್ಸ್ ವಿಚಾರ ಸಂಬಂಧ ಮಾಹಿತಿ ಪಡೆಯಲು ರಾಗಿಣಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ಕಚೇರಿಗೆ ಗುರುವಾರ ಬರಲಿದ್ದು, ಬಳಿಕ ತನಿಖೆ ಮುಂದುವರಿಯಲಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.