ADVERTISEMENT

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾದ ನಟಿ ಶ್ರದ್ಧಾ ಕಪೂರ್ ಸೋದರ ಸಿದ್ಧಾಂತ್

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 10:35 IST
Last Updated 25 ನವೆಂಬರ್ 2025, 10:35 IST
   

ಮುಂಬೈ: ಡ್ರಗ್ಸ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ನಟ, ನಿರ್ದೇಶಕ ಸಿದ್ಧಾಂತ್ ಕಪೂರ್ ಇಂದು ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು.

ಹಿರಿಯ ನಟ ಶಕ್ತಿ ಕಪೂರ್ ಅವರ ಮಗ ಮತ್ತು ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ದಾಂತ್, ಘಾಟ್ಕೊಪರ್‌ನ ಮಾದಕ ವಸ್ತು ನಿಗ್ರಹ ಘಟಕದಲ್ಲಿ ವಿಚಾರಣೆಗೆ ಹಾಜರಾದರು.

ಸಿದ್ಧಾಂತ್ ಜೊತೆಗೆ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒರ್ಹಾನ್ ಅವತ್ರಮಣಿ ಅಲಿಯಾಸ್ ಒರಿ ಅವರನ್ನು ನವೆಂಬರ್ 26ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ADVERTISEMENT

₹252 ಕೋಟಿ ಮೌಲ್ಯದ ಮೆಫೆಡ್ರೋನ್ ವಶಪಡಿಸಿಕೊಂಡ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸಲೀಂ ಮೊಹಮ್ಮದ್ ಸುಹೇಲ್ ಶೇಖ್ ವಿಚಾರಣೆ ವೇಳೆ ಈ ಇಬ್ಬರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು.

ತಾನು ಭಾರತ ಮತ್ತು ವಿದೇಶಗಳಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿಗಳಲ್ಲಿ ಕೆಲವು ಚಲನಚಿತ್ರ ತಾರೆಯರು, ಫ್ಯಾಷನ್ ಲೋಕದ ಸೆಲೆಬ್ರಿಟಿಗಳು, ರಾಜಕಾರಣಿ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ಸಂಬಂಧಿಕರು ಭಾಗವಹಿಸಿದ್ದರು ಎಂದು ಶೇಖ್ ಹೇಳಿಕೊಂಡಿದ್ದರು. ಇದಕ್ಕೂ ಮೊದಲು, 2022ರಲ್ಲಿ ಸಿದ್ಧಾಂತ್ ಅವರನ್ನು ಬೆಂಗಳೂರಿನಲ್ಲಿ ಮಾದಕ ದ್ರವ್ಯ ಸೇವನೆಯ ಆರೋಪದ ಮೇಲೆ ಬಂಧಿಸಲಾಗಿತ್ತು.

'ಲವಿಶ್' ಎಂದೂ ಕರೆಯಲ್ಪಡುವ ಶೇಖ್ ಅವರನ್ನು ಕಳೆದ ತಿಂಗಳು ದುಬೈನಿಂದ ಗಡೀಪಾರು ಮಾಡಲಾಗಿತ್ತು.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ₹252 ಕೋಟಿ ಮೌಲ್ಯದ ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡ ಬಳಿಕ ಶೇಖ್ ಅವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.