ADVERTISEMENT

ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ: ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 6:49 IST
Last Updated 8 ಸೆಪ್ಟೆಂಬರ್ 2020, 6:49 IST
ನಟಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆತಂದರು
ನಟಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆತಂದರು   
""

ಬೆಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್‌ಗೆದಾಳಿ ನಡೆಸಿದ ಅಧಿಕಾರಿಗಳು ಮೊಬೈಲ್ ವಶಕ್ಕೆ ತೆಗೆದುಕೊಂಡುವಿಚಾರಣೆಗೊಳಪಡಿಸಿದ್ದರು. ದಾಳಿ ಬಳಿಕ ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದು ಸಂಜನಾ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬುದಾಗಿ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಸಂಜನಾ ಅವರ ಬಿಎಂಡಬ್ಲ್ಯು ಕಾರನ್ನು ಪೊಲೀಸರು ಪರಿಶೀಲಿಸಿದ್ದಾರೆ. ಕಾರು ಅರ್ಚನಾ ಗಲ್ರಾನಿ ಎಂಬ ಹೆಸರಲ್ಲಿ ನೋಂದಣಿ ಆಗಿದ್ದು, ಸಂಜನಾ ಅವರಿಗೆ ಎರಡು ಹೆಸರಿದೆಯೇ? ಅಥವಾ ಅರ್ಚನಾ ಯಾರುಎಂಬುದರ ಬಗ್ಗೆ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ.

ADVERTISEMENT

ಡ್ರಗ್ಸ್ ಜಾಲಪ್ರಕರಣದಡಿ ಈಗಾಗಲೇ ಬಂಧಿಸಿರುವ ಆರೋಪಿ ವಿರೇನ್ ಖನ್ನಾ ವಿರೇನ್ ಖನ್ನಾ ಮನೆ ಮೇಲೆಯೂ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿರುವ ವಿರೇನ್ ಮನೆಗೆ ಸಿಸಿಬಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.