ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ನಟ ದಿಗಂತ್ ಗೆ ಸಿಸಿಬಿ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದೆ.
ಸಿಸಿಬಿ ಕಚೇರಿಗೆ ಬೆಳಿಗ್ಗೆ 11 ಗಂಟೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಪ್ರಕರಣ ಸಂಬಧ ಕಳೆದ ವಾರವಷ್ಟೇ ದಿಗಂತ್ ಹಾಗೂ ಐಂದ್ರಿತಾ ರೇ ಅವರು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆ ವೇಳೆ ದಿಗಂತ್ ನೀಡಿದ್ದ ಹೇಳಿಕೆಗಳನ್ನು ಆಧರಿಸಿ ಮತ್ತೊಮ್ಮೆ ನೋಟಿಸ್ ನೀಡಿದ್ದು, ದಿಗಂತ್ ಗೆ ಮಾತ್ರ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.