ADVERTISEMENT

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಆರ್ಯನ್ ಖಾನ್‌ ಜಾಮೀನು ಅರ್ಜಿ ತಿರಸ್ಕೃತ

ಡೆಕ್ಕನ್ ಹೆರಾಲ್ಡ್
Published 20 ಅಕ್ಟೋಬರ್ 2021, 10:30 IST
Last Updated 20 ಅಕ್ಟೋಬರ್ 2021, 10:30 IST
ಆರ್ಯನ್ ಖಾನ್‌
ಆರ್ಯನ್ ಖಾನ್‌   

ಮುಂಬೈ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈಯ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಅವರನ್ನು ಮಾದಕ ಪದಾರ್ಥ ನಿಯಂತ್ರಣ ಘಟಕ (ಎನ್‌ಸಿಬಿ) ಅಕ್ಟೋಬರ್ 2ರಂದು ಬಂಧಿಸಿತ್ತು.

ಅಕ್ಟೋಬರ್ 14ರ ವಿಚಾರಣೆ ವೇಳೆ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದ ಎನ್‌ಸಿಬಿ, ಆರ್ಯನ್ ಅವರು ನಿರಂತರವಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿತ್ತು. ಡ್ರಗ್ಸ್‌ ಖರೀದಿಗೆ ಸಂಬಂಧಿಸಿ ಆರ್ಯನ್‌ ಅವರು ನಡೆಸಿದ್ದಾರೆ ಎನ್ನಲಾದ ವಾಟ್ಸ್‌ಆ್ಯಪ್ ಚಾಟ್ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅಲ್ಲದೆ, ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.