ಬೆಂಗಳೂರು: ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಂ ಸೋ’ ಚಿತ್ರವು ಮಲಯಾಳಿ ಭಾಷೆಗೆ ಡಬ್ ಆಗುತ್ತಿದ್ದು, ನಟ ದುಲ್ಕರ್ ಸಲ್ಮಾನ್ ಅವರ ವೇಫೇರರ್ ಫಿಲ್ಮ್ಸ್ ವಿತರಣೆ ಮಾಡಲಿದೆ.
ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಚಿತ್ರತಂಡ, ‘ಸು ಫ್ರಮ್ ಸೋ ಚಿತ್ರವು ಕೇರಳದಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ದುಲ್ಕರ್ ಸಲ್ಮಾನ್ ಅವರ ವೇಫೇರರ್ ಫಿಲ್ಮ್ಸ್ ರಾಜ್ಯಾದ್ಯಂತ ವಿತರಿಸಲಿದೆ’ ಎಂದು ತಿಳಿಸಿದೆ.
ಇದು ಜೆ.ಪಿ.ತುಮಿನಾಡು ನಿರ್ದೇಶನದ ಚೊಚ್ಚಲ ಕನ್ನಡ ಚಿತ್ರವಾಗಿದ್ದು, ಚಿತ್ರದಲ್ಲಿ ಅವರು ಅಶೋಕ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ತಾರಾಬಳಗದಲ್ಲಿ ಶನೀಲ್ ಗೌತಮ್, ಮೈಮ್ ರಾಮದಾಸ್, ದೀಪಕ್ ರೈ ಪಣಾಜೆ, ಪ್ರಕಾಶ್ ತುಮಿನಾಡು, ಸಂಧ್ಯಾ ಅರೆಕೆರೆ ಇದ್ದಾರೆ.
ಸಂದೀಪ್ ತುಳಸೀದಾಸ್ ಹಿನ್ನೆಲೆ ಸಂಗೀತ ಇರುವ ಈ ಚಿತ್ರಕ್ಕೆ ಅರ್ಜುನ್ ರಾಜ್ ಸಾಹಸ ಸಂಯೋಜನೆ ಮಾಡಿದ್ದಾರೆ. ಮಂಗಳೂರು ಸುತ್ತಮುತ್ತಲಿನ ವೇಣೂರು, ಕಕ್ಯಪದವು ಹಾಗೂ ಇತರ ಕಡೆ ಸುಮಾರು 50 ದಿನಗಳ ಕಾಲ ಸಿನಿಮಾದ ಚಿತ್ರೀಕರಣ ನಡೆದಿದೆ.
ಜುಲೈ 25ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.