ADVERTISEMENT

ದುನಿಯಾ ವಿಜಯ್‌ ನಟನೆಯ ‘ಲ್ಯಾಂಡ್‌ಲಾರ್ಡ್’ ಟ್ರೇಲರ್‌ ಬಿಡುಗಡೆಗೆ ದಿನಾಂಕ ನಿಗದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2026, 6:01 IST
Last Updated 16 ಜನವರಿ 2026, 6:01 IST
<div class="paragraphs"><p>ದುನಿಯಾ ವಿಜಯ್‌, ರಚಿತಾ ರಾಮ್</p></div>

ದುನಿಯಾ ವಿಜಯ್‌, ರಚಿತಾ ರಾಮ್

   

ನಟ ದುನಿಯಾ ವಿಜಯ್‌ ಹಾಗೂ ನಟಿ ರಚಿತಾ ರಾಮ್‌ ಅಭಿನಯದಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್‌’ ಸಿನಿಮಾದ ಬಗ್ಗೆ ಚಿತ್ರತಂಡ ಒಂದೊಂದಾಗಿ ಅಪ್‌ಡೇಟ್‌ಗಳನ್ನು ನೀಡುತ್ತಿದೆ. ಸಂಕ್ರಾಂತಿ ಹಬ್ಬದಂದು ಲ್ಯಾಂಡ್‌ಲಾರ್ಡ್ ಚಿತ್ರತಂಡ ಟ್ರೇಲರ್‌ ಬಿಡುಗಡೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಈ ಕುರಿತು ಲ್ಯಾಂಡ್‌ಲಾರ್ಡ್ ನಿರ್ಮಾಣ ಸಂಸ್ಥೆಯಾಗಿರುವ ಸಾರಥಿ ಫಿಲ್ಮ್ಸ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ‘ಬಹುನಿರೀಕ್ಷಿತ ಲ್ಯಾಂಡ್‌ಲಾರ್ಡ್ ಟ್ರೇಲರ್ ಜನವರಿ 18ರಂದು ಮಧ್ಯಾಹ್ನ 12:35ಕ್ಕೆ ಆನಂದ್ ಆಡಿಯೊ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ’ ಎಂದು ಬರೆದುಕೊಂಡಿದೆ.

ADVERTISEMENT

ಲ್ಯಾಂಡ್‌ಲಾರ್ಡ್ ಸಿನಿಮಾ ವಿಶ್ವದಾದ್ಯಂತ ಜನವರಿ 23ರಂದು ಬಿಡುಗಡೆಯಾಗುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಸುಂದರ ಹಾಡುಗಳು ಮೂಡಿಬಂದಿವೆ. ಈ ಚಿತ್ರವನ್ನು ‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಕನ್ನಡ ನೆಲದ ಕಥೆಯಾಗಿದೆ. ರಚಿತಾರಾಮ್, ರಿತನ್ಯಾ, ಶಿಶಿರ್ ಬೈಕಾಡಿ, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.