ADVERTISEMENT

ಪ್ರಜ್ವಲ್ ದೇವರಾಜ್ ನಟನೆಯ 'ಮಾಫಿಯಾ' ಟೀಸರ್ ಮೂರು ಭಾಷೆಗಳಲ್ಲಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 6:28 IST
Last Updated 27 ಜನವರಿ 2022, 6:28 IST
   

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ‘ಮಾಫಿಯಾ’ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ‌. ಚಿತ್ರದ ಟೀಸರ್ ಕೂಡ ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಮೂರೂ ಭಾಷೆಗಳಿಗೆ ಅನ್ವಯವಾಗುವಂತೆ ಸಂಭಾಷಣೆ ರಹಿತ ಟೀಸರ್‌ನ್ನು ರೂಪಿಸಲಾಗಿದೆ. ಕನ್ನಡದಲ್ಲಿ ಧ್ರುವ ಸರ್ಜಾ, ಸತೀಶ್ ನೀನಾಸಂ ಹಾಗೂ ರಿಷಬ್ ಶೆಟ್ಟಿ, ತೆಲುಗಿನಲ್ಲಿ ಸುಧೀರ್ ಬಾಬು ಮತ್ತು ರಾಜಶೇಖರ್ ಹಾಗೂ ತಮಿಳಿನಲ್ಲಿ ಸತ್ಯರಾಜ್, ವೆಂಕಟ್ ಪ್ರಭು, ಪಾರ್ಥಿಬನ್ ಹಾಗೂ ನಿರ್ದೇಶಕ ಶಿಶೀಂದ್ರನ್ ‘ಮಾಫಿಯಾ’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಚಿತ್ರದ ಆಡಿಯೋ ಹಕ್ಕು ಸಹ ಆನಂದ್ ಆಡಿಯೋಗೆ ಭಾರೀ ಮೊತ್ತಕ್ಕೆ ಮಾರಾಟವಾಗಿದೆ.

ಮಾಫಿಯಾ ಚಿತ್ರದ ಪೋಸ್ಟರ್‌

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ದೇವರಾಜ್ ಅವರು ಸಹ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಧುಕೋಕಿಲ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

ADVERTISEMENT

ತರುಣ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.