
ನಟ ಯುವ ರಾಜ್‌ಕುಮಾರ್, ಸಂಜನಾ ಆನಂದ್, ಸಂಪದಾ ನಟನೆಯ ಎಕ್ಕ ಚಿತ್ರವು ಒಟಿಟಿ ಪ್ಲಾಟ್ ಫಾರಂ ಸನ್‌ನೆಕ್ಸ್ಟ್‌ನಲ್ಲಿ ಇಂದು (ಗುರುವಾರ) ಬಿಡುಗಡೆಯಾಗಿದೆ ಎಂದು ಪಿಆರ್‌ಕೆ ಪ್ರೊಡಕ್ಷನ್ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
'ಯುವ' ಸಿನಿಮಾ ಬಳಿಕ ಯುವ ರಾಜ್‌ಕುಮಾರ್ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಯಾವುದೋ ಒಂದು ಕಾರಣಕ್ಕೆ ಹುಟ್ಟಿದ ಊರು ಬಿಟ್ಟು ನಗರ ಸೇರುವ ನಾಯಕ ಮುಂದೆ ಭೂಗತ ಜಗತ್ತಿಗೆ ಹೆಜ್ಜೆ ಇಡುವ, ತಾಯಿ ಪ್ರೀತಿ ಅರಸುವ ಹಲವು ಕಥೆಗಳು ತೆರೆ ಮೇಲೆ ಬಂದಿವೆ.
ಚಿತ್ರದಲ್ಲಿ ‘ಡೆಡ್ಲಿ ಸೋಮ’ ಖ್ಯಾತಿಯ ನಟ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಬಾಲಿವುಡ್ ನಟ ಅತುಲ್ ಕುಲಕರ್ಣಿ ಕೂಡಾ ತಾರಾಬಳಗದಲ್ಲಿದ್ದಾರೆ.
‘ಎಕ್ಕ’ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದು, ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೊಸ್ ಹಾಗೂ ಜಯಣ್ಣ ಕಂಬೈನ್ಸ್ ಬ್ಯಾನರ್‌ಗಳ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಈ ಚಿತ್ರದ ಬ್ಯಾಂಗಲ್ ಬಂಗಾರಿ ಹಾಡು ಪ್ರೇಕ್ಷಕರನ್ನು ಸೆಳೆದು ರಂಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.