ನಟ ಯುವರಾಜ್‌ಕುಮಾರ್ ನಟನೆಯ ‘ಎಕ್ಕ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಹೊಸ ಅವತಾರದಲ್ಲಿ ಯುವ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ ಎನ್ನುವುದಕ್ಕೆ ಟೀಸರ್ ಸಾಕ್ಷಿಯಾಗಿದೆ.
ಮಗು-ಮೃಗ ಎನ್ನುವ ಡೈಲಾಗ್ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಯುವ ಕಾಣಿಸಿಕೊಂಡಿದ್ದಾರೆ. ಸಿನಿಮಾ ಜೂನ್ 6ರಂದು ತೆರೆಕಾಣುತ್ತಿದ್ದು, ಚಿತ್ರಕ್ಕೆ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂಪದ ಹಾಗೂ ಸಂಜನಾ ಆನಂದ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣವೇ ಚಿತ್ರದಲ್ಲಿ. ಸತ್ಯ ಹೆಗಡೆ ಛಾಯಾಚಿತ್ರಗ್ರಹಣ ಮತ್ತು ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾವ್ ಅವರ ಕೆಆರ್‌ಜಿ ಸ್ಟುಡಿಯೊಸ್, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.