‘ಅಗ್ನಿಸಾಕ್ಷಿ’, ‘ನಾಗಿಣಿ’ ಧಾರಾವಾಹಿಗಳ ನಿರ್ದೇಶಕ ಹಯವದನ ಆ್ಯಕ್ಷನ್ ಕಟ್ ಹೇಳಿರುವ ಚೊಚ್ಚಲ ಚಿತ್ರ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಫೆ.7ರಂದು ತೆರೆಗೆ ಬರಲಿದೆ.
ತಂದೆ ಮಗನ ಬಾಂಧವ್ಯದ ಕಥೆಯನ್ನು ಹೊಂದಿರುವ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ವೆನ್ಯಾ ರೈ ಜೋಡಿಯಾಗಿದ್ದಾರೆ. ದೇಶದಾದ್ಯಂತ ಸಂಚರಿಸುವ ನಾಯಕ ಮರಾಠಿ ಹುಡುಗಿಯನ್ನು ಪ್ರೀತಿಸುತ್ತಾನೆ. ಕರ್ನಾಟಕವಲ್ಲದೆ ಉತ್ತರ ಭಾರತದ ಹಲವು ಕಡೆ ಚಿತ್ರೀಕರಣಗೊಂಡಿದೆ.
ಚಿತ್ರದಲ್ಲಿ ಸಂಜನಾ ದಾಸ್ ಕೂಡ ಒಂದು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಬಿರಾದರ್, ಶರತ್ ಲೋಹಿತಾಶ್ವ, ದಾನಪ್ಪ, ಸ್ವಾತಿ, ದಿನೇಶ್ ಮಂಗಳೂರು, ಲಕ್ಷ್ಮೀ ನಾಡಗೌಡ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಿತ್ರಕ್ಕೆ ಶಿವ ಪ್ರಸಾದ್ ಸಂಗೀತ, ನಟರಾಜ್ ಮದ್ದಾಲ ಛಾಯಾಚಿತ್ರಗ್ರಹಣ, ರವಿಚಂದ್ರನ್ ಸಂಕಲನ, ವೇಣು ಹಸ್ರಾಳಿ ಸಂಭಾಷಣೆಯಿದೆ. ‘ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್’ ಮತ್ತು ‘ಕೃಷ್ಣಛಾಯಾ ಚಿತ್ರ’ ಬ್ಯಾನರ್ ಮೂಲಕ ಪವನ್ ಸಿಮಿಕೇರಿ ಹಾಗೂ ಸಿಂಧು ಹಯವದನ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.