‘ಕಾಟೇರ’ ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣದ, ಪುನೀತ್ ರಂಗಸ್ವಾಮಿ ನಿರ್ದೇಶನದ ‘ಏಳುಮಲೆ’ ಸಿನಿಮಾದ ಎರಡನೇ ಹಾಡು ‘ಕಾಪಾಡೋ ದ್ಯಾವ್ರೇ..’ ಬಿಡುಗಡೆಯಾಗಿದೆ.
ಸಿನಿಮಾದಲ್ಲಿ ‘ಏಕ್ ಲವ್ ಯಾ’ ಮೂಲಕ ಚಂದನವನ ಪ್ರವೇಶಿಸಿದ್ದ ನಟ ರಾಣಾ, ‘ಮಹಾನಟಿ’ ರಿಯಾಲಿಟಿ ಶೋ ವಿಜೇತೆ ಪ್ರಿಯಾಂಕಾ ಆಚಾರ್ ಮುಖ್ಯಭೂಮಿಕೆಯಲ್ಲಿದ್ದಾರೆ. ನಟಿಯರಾದ ಶ್ರುತಿ, ಸುಧಾರಾಣಿ ಹಾಗೂ ತಾರಾ ಅನುರಾಧ ಎರಡನೇ ಹಾಡನ್ನು ಬಿಡುಗಡೆ ಮಾಡಿದರು.
‘ಸಿನಿಮಾ ನೋಡಿ ಪ್ರೇಕ್ಷಕರು ಹೊರಗೆ ಬಂದಾಗ ರಾಣಾ ಸಖತ್ ಆಗಿ ನಟನೆ ಮಾಡಿದ್ದಾರೆ ಎಂದು ಖಂಡಿತವಾಗಿಯೂ ಹೇಳುತ್ತಾರೆ. ಒಬ್ಬ ಕಲಾವಿದನಾಗಿ ಹೆಸರು ಮಾಡುವ ಅವಕಾಶ ಈ ಚಿತ್ರದಲ್ಲಿ ರಾಣಾಗೆ ಸಿಕ್ಕಿದೆ. ಪ್ರಿಯಾಂಕಾ ಅವರ ನಟನೆಯೂ ಚೆನ್ನಾಗಿದೆ’ ಎಂದರು ನಟಿ ಶ್ರುತಿ.
‘ಕಾಪಾಡೋ ದ್ಯಾವ್ರೇ..’ ಹಾಡು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ಯಲ್ಲಿ ಜಗಪತಿ ಬಾಬು, ಟಿ.ಎಸ್.ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗ್ಗಪ್ಪ ತಾರಾಬಳಗದಲ್ಲಿದ್ದಾರೆ. ಅದ್ವೈತ್ ಗುರುಮೂರ್ತಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ನಾಗಾರ್ಜುನ್ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.