ADVERTISEMENT

ಅಕ್ರಮ ಹಣ ವರ್ಗಾವಣೆ ಸುಳಿಯಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್: ಇ.ಡಿ ವಿಚಾರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಆಗಸ್ಟ್ 2021, 12:19 IST
Last Updated 30 ಆಗಸ್ಟ್ 2021, 12:19 IST
ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್
ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಸತತ ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಿಚ್ಚ ಸುದೀಪ್‌ ಅಭಿನಯದ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್‌ ಅವರ ಪಾತ್ರದ ಫಸ್ಟ್‌ಲುಕ್‌ ಸಹ ಬಿಡುಗಡೆಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.