ADVERTISEMENT

ಫಹಾದ್‌–ಪವನ್‌ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2022, 9:51 IST
Last Updated 9 ಅಕ್ಟೋಬರ್ 2022, 9:51 IST
ಧೂಮಂ ಚಿತ್ರದ ಮುಹೂರ್ತದಲ್ಲಿ ಚಿತ್ರತಂಡ
ಧೂಮಂ ಚಿತ್ರದ ಮುಹೂರ್ತದಲ್ಲಿ ಚಿತ್ರತಂಡ   

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್‌ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ. ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ ಜೋಡಿಯಾಗಿ ನಟಿಸುತ್ತಿರುವ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ಈ ಚಿತ್ರ ಹೊಂಬಾಳೆಯ ಹನ್ನೆರಡನೇ ಚಿತ್ರ. ಮಲಯಾಳ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ.

ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ಮಾಡಿದರು.

ADVERTISEMENT

ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು "ಕೆಜಿಎಫ್" ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಶುಭ ಕೋರಿದರು. ಮುಂದಿನ ತಿಂಗಳಿನಿಂದ "ಧೂಮಂ" ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ "ಧೂಮಂ" ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.